74
ಹೊಸದಿಲ್ಲಿ : ಭಾರತ ಮತ್ತು ಚೀನಾ ನಡುವಿನ ಸ್ಥಿರ, ಪ್ರಾಮಾಣಿಕ ಮತ್ತು ರಚನಾತ್ಮಕ ದ್ವಿಪಕ್ಷೀಯ ಸಂಬಂಧ, ಪ್ರಾದೇಶಿಕ ಮಾತ್ರವಲ್ಲದೆ ಜಾಗತಿಕ ಶಾಂತಿ ಮತ್ತು ಸಮೃದ್ಧಿ ನೆಲೆಗೊಳಿಸಲು ಗಮನಾರ್ಹ ಕೊಡುಗೆ ನೀಡಲಿದೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾದ ಬಳಿಕ ಪ್ರಧಾನಿ ಮೋದಿ ಹೇಳಿದ್ದಾರೆ.
ಭಾರತ ಪ್ರವಾಸದಲ್ಲಿರುವ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಸೋಮವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್‌ರನ್ನು ಭೇಟಿಯಾದ ಬಳಿಕ ಮಂಗಳವಾರ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಭೇಟಿಯಾದ ಸಚಿವ ವಾಂಗ್, ಎಸ್ ಇ ಒ ಸಮ್ಮೇಳನದ ಕಾರ್ಯಸೂಚಿ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ವಾಂಗ್ ಭೇಟಿಯ ಬಳಿಕ ಎಸ್ ಸಿ ಒ ಸಮ್ಮೇಳನದಲ್ಲಿ ತಾವು ಭಾಗವಹಿಸುವುದಾಗಿ ಪ್ರಧಾನಿ ಮೋದಿ ದೃಢೀಕರಿಸಿದ್ದಾರೆ

