333
ನವದೆಹಲಿ : ದೆಹಲಿಯ ರೋಹಿಣಿ ಉಪನಗರದ ಪ್ರಶಾಂತ್ ವಿಹಾರ್ ಪ್ರದೇಶದ ಸಿಆರ್ ಪಿಎಫ್ ಶಾಲೆ ಬಳಿ ಭಾನುವಾರ ಬೆಳಗ್ಗೆ 7.50ರ ವೇಳೆಗೆ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಭಾನುವಾರ ಆಗಿದ್ದ ಕಾರಣ ಶಾಲೆಯ ಬಳಿ ಯಾವುದೇ ಮಕ್ಕಳು ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ
ಶಾಲೆಯ ಗೋಡೆ ಬಳಸಿ ಸ್ಫೋಟ ನಡೆಸಲಾಗಿದ್ದು, ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ 2 ಕಿ.ಮೀ. ವ್ಯಾಪ್ತಿಯಲ್ಲಿ ಬಾಂಬ್ ಶಬ್ದ ಕೇಳಿಸಿದೆ. ಸ್ಫೋಟದ ಸ್ಥಳದಲ್ಲಿ ಭಾರೀ ಪ್ರಮಾಣದ ಹೊಗೆ ಎದ್ದ ದೃಶ್ಯಗಳು ಸ್ಥಳೀಯರ ಮೊಬೈಲ್ ಗಳಲ್ಲಿ ಸೆರೆಯಾಗಿವೆ. ಸುತ್ತಲಿನ ಕೆಲ ಕಟ್ಟಡಗಳ ಗೋಡೆ, ವಾಹನಗಳ ಗಾಜು ಒಡೆದಿದೆಯಾದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ,
ಘಟನೆಯಿಂದ ಪ್ರಾಣಹಾನಿ ಆಗಿಲ್ಲವಾದರೂ ಜನರಲ್ಲಿ ಭಯಮೂಡಿಸಲೆಂದೇ ಈಕೃತ್ಯ ಎಸಗಿದಂತಿದೆ. ನಿಗೂಢ ಪೌಡರ್ ಸ್ಥಳದಲ್ಲಿ ಪತ್ತೆ ಆಗಿದೆ. ಈ ಬಗ್ಗೆ ತನಿಖೆ ನಡೆದಿದೆ ಹಾಗೂ ದಾಳಿಕೋರರ ಪತ್ತೆಗೆ ಕ್ರಮ ಜರುಗಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

