ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಲೋಕಸಭಾ ಕ್ಷೇತ್ರವನ್ನು ತೆರವು ಮಾಡಲಿದ್ದಾರೆ ಮತ್ತು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಘೋಷಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ತಮ್ಮ ಸಹೋದರನಿಂದ ತೆರವಾಗುವ ವಯನಾಡು ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಇದೇ ವೇಳೆ ಖರ್ಗೆ ತಿಳಿಸಿದ್ದಾರೆ