ಹೊಸದಿಲ್ಲಿ : ಕರ್ನಾಟಕದ ಆಡಳಿತರೂಢ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಮಾಡಿರುವುದು ಹಾಗೂ ಮುಡಾ ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾಡದೆ ಭ್ರಷ್ಟಾಚಾರ ಎಸಗಿರುವುದನ್ನು ಖಂಡಿಸಿ ಶುಕ್ರವಾರ ಸಂಸತ್ ಭವನದ ಆವರಣದಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ಮಾಡಿ, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿದರು
ಕರ್ನಾಟಕದಿಂದ ಆಯ್ಕೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಸಂಸತ್ ಉಭಯ ಸದನಗಳ ಸಂಸದರು ದಿಲ್ಲಿಯಲ್ಲಿ ಕರ್ನಾಟಕ ಸರ್ಕಾರದ ಅಕ್ರಮಗಳನ್ನು ಪ್ರತಿಭಟಿಸುವ ಮೂಲಕ ಸರ್ಕಾರದ ಕಾರ್ಯ ವೈಖರಿಯನ್ನು ಖಂಡಿಸಿದರು. ಅಲ್ಲದೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದರು.