ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಶೇ.40 ಕಮಿಷನ್ ಆರೋಪದ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಸ್. ಕೇಶವ್ ಪ್ರಸಾದ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಧೀಶರಾದ ಕೆ. ಎನ್. ಶಿವಕುಮಾರ್ ನಡೆಸಿದರು. ದಿಲ್ಲಿಯಿಂದ ಬೆಂಗಳೂರಿಗೆ ಬಂದಿಳಿದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜತೆ ಹಾಜರಾದರು. ರಾಹುಲ್ ಅವರ ಹಾಜರಾತಿ ದಾಖಲಿಸಿಕೊಂಡ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿತು.