Home » ವಿಶ್ವದ ಅತೀ ಎತ್ತರದ ರೈಲ್ವೆ ಬ್ರಿಡ್ಜ್‌ ಇಂದು ಲೋಕಾರ್ಪಣೆ
 

ವಿಶ್ವದ ಅತೀ ಎತ್ತರದ ರೈಲ್ವೆ ಬ್ರಿಡ್ಜ್‌ ಇಂದು ಲೋಕಾರ್ಪಣೆ

by Kundapur Xpress
Spread the love

ಜಮ್ಮು : ಚಿನಾಬ್ ನದಿಗೆ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಶುಕ್ರವಾರ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಜಮ್ಮುವಿನ ಶ್ರೀಕ್ಷೇತ್ರ ವೈಷ್ಟೋದೇವಿ ಸನಿಹದ ಕಟ್ರಾ-ಶ್ರೀನಗರ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಸುಮಾರು 1,400 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾದ ಚಿನಾಬ್ ಸೇತುವೆಯು ವಿಶ್ವದ ಅತಿ ಎತ್ತರದ ರೈಲು ಮತ್ತು ಕಮಾನು ಸೇತುವೆಯಾಗಿದ್ದು, ನದಿಯ ತಳದಿಂದ 359 ಮೀಟರ್‌ ಎತ್ತರವಿದೆ.ಇದು ಪ್ಯಾರಿಸ್‌ನ ಐಫೆಲ್‌ ಟವರ್‌ಗಿಂತ 35 ಮೀಟರ್‌ಎತ್ತರವಾ ಗಿದೆ. 1,315 ಮೀ. ಉದ್ದದ ಸೇತುವೆ ಇದಾಗಿದ್ದು, ಸಿವಿಲ್ ಎಂಜಿನಿಯರಿಂಗಲ್ಲಿ ದೇಶದ ಅದ್ಭುತವೆಂದು ಪರಿಗಣಿಸಲಾಗಿದೆ.

 

Related Articles

error: Content is protected !!