72
ಶ್ರೀನಗರ : ಭಾರತವನ್ನು ಪರಮಾಣು ಬಾಂಬ್ ದಾಳಿಯ ಬ್ಲ್ಯಾಕ್‌ಮೇಲ್‌ಗೆ ಗುರಿ ಮಾಡುತ್ತಿರುವ ಪಾಕಿಸ್ತಾನ ವಿರುದ್ಧ ಕಿಡಿಕಾರಿರುವ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್, ‘ರಾಕ್ಷಸ ದೇಶದ ಬಳಿ ಪರಮಾಣು ಅಸ್ತ್ರ ಇರುವುದು ಸುರಕ್ಷಿತವೇ’ ? ಎಂದು ಜಾಗತಿಕ ಸಮುದಾಯವನ್ನು ಪ್ರಶ್ನಿಸಿದ್ದಾರೆ. ಇದೇ ವೇಳೆ ಪಾಕಿಸ್ತಾನವನ್ನು ಪರಮಾಣು ಬಾಂಬ್ ಇರುವ ಭಿಕ್ಷುಕ ದೇಶ ಎಂದು ವ್ಯಂಗ್ಯವಾಡಿದ್ದಾರೆ
ಜೊತೆಗೆ ನಾವು ಐಎಂಎಫ್‌ಗೆ ನೀಡಿದ ದೇಣಿಗೆ ಹಣವನ್ನು ಅವರು ಸಾಲವಾಗಿ ಪಡೆದು ಉಗ್ರರಿಗೆ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ ಬೆನ್ನಲ್ಲೇ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಕಾಶ್ಮೀರದ ಗಡಿ ನಿಯಂತ್ರಣ ರೇಖೆಗೆ ಭೇಟಿ ನೀಡಿದ್ದರು. ‘ಆಪರೇಷನ್ ಸಿಂದೂರ’ ಬಳಿಕದ ಈ ಮೊದಲ ಭೇಟಿ ವೇಳೆ ಸೈನಿಕರೊಂದಿಗೆ ಸಂವಾದ ನಡೆಸಿದ ಸಿಂಗ್, ಅವರ ಪರಾಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

