Home » ರಾಜಾನಾಥ್‌ ಸಿಂಗ್‌ ನೇತೃತ್ವದಲ್ಲಿ ಸಶಸ್ತ್ರಪಡೆ ಮುಖ್ಯಸ್ಥರ ಸಭೆ
 

ರಾಜಾನಾಥ್‌ ಸಿಂಗ್‌ ನೇತೃತ್ವದಲ್ಲಿ ಸಶಸ್ತ್ರಪಡೆ ಮುಖ್ಯಸ್ಥರ ಸಭೆ

by Kundapur Xpress
Spread the love

ನವದೆಹಲಿ : ಗುರುವಾರ ಪಾಕಿಸ್ತಾನ ನಡೆಸಿದ ದೊಡ್ಡ ಪ್ರಮಾಣದ ಡ್ರೋನ್ ದಾಳಿ ವಿಫಲವಾದ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ರಾಷ್ಟ್ರ ರಾಜಧಾನಿಯಲ್ಲಿರುವ ರಕ್ಷಣಾ ಸಚಿವಾಲಯದ ನೆಲೆಯಾಗಿರುವ ಸೌತ್ ಬ್ಲಾಕ್‌ನಲ್ಲಿ ದೇಶದ ಪ್ರಸ್ತುತ ಭದ್ರತಾ ಪರಿಸ್ಥಿತಿಯ ಪರಿಶೀಲನೆ ನಡೆಸಿದರು.

ರಕ್ಷಣಾ ಸಚಿವರೊಂದಿಗೆ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮ‌ರ್ ಪ್ರೀತ್ ಸಿಂಗ್ ಮತ್ತು ರಕ್ಷಣಾ ಕಾರ್ಯದರ್ಶಿ ಆರ್‌ ಕೆ ಸಿಂಗ್ ಸೇರಿದಂತೆ ಸೇನಾ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.

ಬುಧವಾರ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಆಪರೇಷನ್ ಸಿಂದೂ‌ರ್ ನಂತರ ಪಾಕಿಸ್ತಾನ ಪ್ರತೀಕಾರ ತೀರಿಸಿಕೊಳ್ಳಲು ಪ್ರಯತ್ನಿಸಿದ ನಂತರ ನಡೆದ ಈ ಸಭೆ ಭಾರೀ ಮಹತ್ವ ಪಡೆದಿದೆ

 

Related Articles

error: Content is protected !!