ಚೆನ್ನೈ : ಹೃದಯ ರಕ್ತನಾಳದಲ್ಲಿ ಊತದಿಂದಾಗಿ ಆಸ್ಪತ್ರೆಗೆ ಸೇರಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಹೀಗಾಗಿ ಗುರುವಾರ ತಡರಾತ್ರಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹೃದಯದ ರಕ್ತನಾಳ ದಲ್ಲಿ ಊತ ಸಂಭವಿಸಿದ ಕಾರಣ ರಜನೀಕಾಂತ್ ಅವರನ್ನು ಸೆ.30ರಂದು ಚೆನ್ನೈನಲ್ಲಿನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆಯ ಬಳಿ ರಕ್ತನಾಳಕ್ಕೆ ಸ್ಟಂಟ್ ಅಳವಡಿಕೆ ಕಾರ್ಯ ನಡೆದಿತ್ತು. ಈ ಎಲ್ಲಾ ಚಿಕಿತ್ಸೆಗಳಿಗೂ ರಜನಿ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳೀಸಿದೆ