Home » ಕೋಲ್ಕತಾ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ರೇಪ್
 

ಕೋಲ್ಕತಾ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ರೇಪ್

by Kundapur Xpress
Spread the love

ಕೋಲ್ಕತಾ : ಕಳೆದ ವರ್ಷ ಕೋಲ್ಕತಾದ ಆರ್‌ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಮೇಲಿನ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮಾಸುವ ಮುನ್ನವೇ, ಕೋಲ್ಕತಾದ ಕಾನೂನು ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರದ ಘಟನೆ ನಡೆದಿದೆ.

ಜೂ.25ರ ಸಂಜೆ ನಡೆದ ಘಟನೆ ಸಂಬಂಧ ಅದೇ ಕಾಲೇಜಿನ ಇಬ್ಬರು ಹಿರಿಯ ವಿದ್ಯಾರ್ಥಿಗಳು ಮತ್ತು ಒಬ್ಬ ಹಳೆಯ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಮೂವರನ್ನೂ ನ್ಯಾಯಾಲಯ 4 ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿದೆ.

ಜೂ.25ರಂದು ಮಧ್ಯಾಹ್ನ ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಸಂಜೆಯವರೆಗೆ ಉಳಿಸುವಂತೆ ಮೂವರ ಗುಂಪು ಸೂಚಿಸಿದೆ. ಬಳಿಕ ಆಕೆಯನ್ನು ಕೊಠಡಿಯೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದೆ. ಅಲ್ಲದೆ ಘಟನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ವಿಷಯ ಯಾರಿಗಾದರೂ ತಿಳಿಸಿದರೆ ವಿಡಿಯೋ ಬಹಿರಂಗದ ಬೆದರಿಕೆ ಹಾಕಿದೆ.

ಆದರೂ ವಿದ್ಯಾರ್ಥಿನಿ ಧೈರ್ಯ ತೋರಿ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಆರೋಪಿಗಳಾದ ಮನೋಜಿತ್ ಮಿಶ್ರಾ (31), ಜೈಬ್ ಅಹಮದ್ (19), ಪ್ರಮಿತ್ ಮುಖೋಪಾಧ್ಯಾಯ ಅಲಿಯಾಸ್ ಪ್ರಮಿತ್ ಮುಖರ್ಜಿಯನ್ನು ಬಂಧಿಸಲಾಗಿದೆ.

ಈ ನಡುವೆ ಘಟನೆ ಕುರಿತು ಸಮಗ್ರ ವರದಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗವು, ಕೋಲ್ಕತಾ ಪೊಲೀಸರಿಗೆ ಸೂಚಿಸಿದೆ.

 

Related Articles

error: Content is protected !!