133
ಭುವನೇಶ್ವರ : ಶಿಕ್ಷಕನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪವೆಸಗಿ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಓಡಿಶಾದ ಬಾಲಾಸೋರ್ ಕಾಲೇಜಿನ ಕ್ಯಾಂಪಸ್ ನಲ್ಲಿಯೇ ಮೈಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಭುವನೇಶ್ವರದ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ:
ಪ್ರಕರಣದ ಹಿನ್ನೆಲೆ :
ಯುವತಿ ಒಡಿಶಾದ ಬಾಲಾ ಸೋರ್‌ಜಿಲ್ಲೆಯ ಫಕೀರ್ ಮೋಹನ್ ಕಾಲೇಜಿನಲ್ಲಿ 2ನೇ ವರ್ಷದ ಬಿ.ಇಡಿ. ಓದುತ್ತಿದ್ದರು. ಈ ವೇಳೆ ಸಹಾಯಕ ಪ್ರಾಧ್ಯಾಪಕ ಸಮೀರ್ ಕುಮಾರ್‌ಸಾಹು ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಿ ಕಾಲೇಜಿನ ಪ್ರಾಂಶುಪಾಲರಿಗೆ ಹಾಗೂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆತನ ವಿರುದ್ಧ ಕ್ರಮ ವಿಳಂಬ ಆದಾಗ ನ್ಯಾಯಕ್ಕೆ ಆಗ್ರಹಿಸಿ ಕಾಲೇಜಿನ ಕ್ಯಾಂಪಸ್ ನಲ್ಲಿಯೇ ಮೈಗೆ ಬೆಂಕಿ ಹಾಕಿಕೊಂಡ ಆತ್ಮಹತ್ಯೆಗೆ ಯತ್ನಿಸಿದ್ದರು

