72
ಹೊಸದಿಲ್ಲಿ : ಆಧುನಿಕ ತಂತ್ರಜ್ಞಾನಗಳಿಂದ ಸಮಾಜ ಮತ್ತು ಉದ್ಯೋಗ ಮಾರುಕಟ್ಟೆಯ ಮೇಲೆ ಉಂಟಾಗಿರುವ ಪರಿಣಾಮಗಳ ಕುರಿತಂತೆ ಮೌಲ್ಯಮಾಪನವೊಂದರ ಅಗತ್ಯವಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಮೋಹನ್ ಭಾಗ್ವತ್ ಕರೆ ನೀಡಿದ್ದಾರೆ
ಉದ್ಯೋಗಾವಕಾಶಗಳ ಮೇಲೆ ಇದರಿಂದ ಪರಿಣಾಮ ಬೀರದಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದಿದ್ದಾರೆ. ಭಾರತೀಯ ಮಜ್ದೂರ್ ಸಂಘದ ಸ್ಥಾಪನೆಯ 70ನೇ ವರ್ಷಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರನ್ನು ಉದ್ಯೋಗದಾತರು ಶೋಷಣೆ ಮಾಡದಂತೆ ವಿಶೇಷ ಗಮನ ನೀಡುವ ಅಗತ್ಯವಿದೆ ಎಂದರು.

