90
ಮುಂಬೈ : ಪ್ರಧಾನಿ ನರೇಂದ್ರ ಮೋದಿ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಮುಖ್ಯ ಕಚೇರಿಗೆ ಭಾನುವಾರ ಭೇಟಿ ನೀಡ ಲಿದ್ದಾರೆ. ಪ್ರಧಾನಿಯೊಬ್ಬರು ಸಂಘದ ಕಚೇರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಈ ವೇಳೆ ಅಲ್ಲಿನ ಸ್ಮೃತಿ ಮಂದಿರದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಡಾ.ಕೆ.ಬಿ.ಹೆಡಗೇವಾರ್ ಹಾಗೂ 2ನೇ ಸರಸಂಘಚಾಲಕ ಗುರೂಜಿ ಗೋಳವಲಕರ್ ಅವರ ಸ್ಮಾರಕಕ್ಕೆ ಗೌರವ ಸಲ್ಲಿಸಲಿದ್ದಾರೆ. ಅಂದೇ ಆರ್‌ಎಸ್‌ಎಸ್‌ನ ಬಹುಮುಖ್ಯ ಯುಗಾದಿ ಉತ್ಸವ ನಡೆಯಲಿದ್ದು, ಅದರಲ್ಲಿ ಭಾಗಿಯಾಗಲಿದ್ದಾರೆ.

