Home ರಾಷ್ಟ್ರೀಯ ಸುದ್ದಿಭಾರತದ ಪ್ರತೀಕಾರಕ್ಕೆ ರಷ್ಯಾ ಜಪಾನ್‌ ಬೆಂಬಲ

ಭಾರತದ ಪ್ರತೀಕಾರಕ್ಕೆ ರಷ್ಯಾ ಜಪಾನ್‌ ಬೆಂಬಲ

by Kundapur Xpress

ನವದೆಹಲಿ : ಪಹಲ್ಗಾಂ ಉಗ್ರದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಸಜ್ಜಾಗುತ್ತಿರುವ ಭಾರತಕ್ಕೆ ಇದೀಗ ರಷ್ಯಾ ಅಧ್ಯಕ್ಷ ವ್ಹಾಡಿಮಿರ್ ಪುಟಿನ್ ಅವರಿಂದಲೂ ಬೆಂಬಲ ಲಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ದೂರವಾಣಿ ಸಂಭಾಷಣೆ ವೇಳೆ ಪಹಲ್ಗಾಂ ದಾಳಿಯನ್ನು ಕ್ರೂರ ಘಟನೆ ಎಂದು ಖಂಡಿಸಿದ ಪುಟಿನ್  ದಾಳಿಕೋರರನ್ನು ಶಿಕ್ಷಿಸಿ ಎಂದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ರಣಧೀ‌ರ್ ಜೈಸ್ವಾಲ್, ದಾಳಿಯಲ್ಲಿ ಮೃತಪಟ್ಟ ಅಮಾಯಕರಿಗೆ ಸಂತಾಪ ಸೂಚಿಸಿದ ಪುಟಿನ್, ಉಗ್ರವಾದದ ವಿರುದ್ಧದ ಭಾರತದ ಯುದ್ದಕ್ಕೆ ಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದಾರೆ. ಅಂತೆಯೇ ದಾಳಿಯನ್ನು ಕ್ರೂರ ಅಪರಾಧ ಎಂದು ಹೇಳಿರುವ ಅವರು ಅದರ ಹಿಂದಿರುವವರನ್ನು ಶಿಕ್ಷಿಸಿ ಎಂದಿದ್ದಾರೆ’ ಎಂದು ತಿಳಿಸಿದ್ದಾರೆ. “ಇದೇ ವೇಳೆ, ‘ ಭಾರತ-ರಷ್ಯಾ ನಡುವಿನ ವಿಶೇಷ ಪಾಲುದಾರಿಕೆಯನ್ನು ಮತ್ತಷ್ಟು ಗಾಢಗೊಳಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಎಂದು ಜೈಸ್ವಾಲ್ ಮಾಹಿತಿ ನೀಡಿದ್ದಾರೆ

ಜೆಪಾನ್ ಬೆಂಬಲ :

ಭಾರತದ ಪ್ರವಾಸದಲ್ಲಿರುವ ಜಪಾನ್‌ನ ರಕ್ಷಣಾ ಸಚಿವ ಜ। ನಕತಾನಿ ಅವರು ಉಗ್ರವಾದದ ವಿರುದ್ಧ ಹೋರಾಟಕ್ಕೆ ಭಾರತಕ್ಕೆ ಸಂಪೂರ್ಣ ಬೆಂಬಲವನ್ನು ಸೂಚಿಸಿದ್ದಾರೆ.

Related Articles