111
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ನೇಮಕಗೊಂಡಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಕೆ. ಮಿಶ್ರಾ ಅವರು 2019ರ ಸೆಪ್ಟೆಂಬರ್ 11ರಿಂದ ಪ್ರಧಾನಿ ಅವರ ಮೊದಲ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನು ಮುಂದೆ ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಎರಡನೇ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಶಕ್ತಿಕಾಂತ್ ದಾಸ್ ನೇಮಕಾತಿ ಪ್ರಧಾನಿ ಅವರ ಅವಧಿ ಮುಗಿಯುವವರೆಗೆ ಇಲ್ಲವೆ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದು ಸಂಪುಟದ ನೇಮಕಾತಿ ಸಮಿತಿ ತಿಳಿಸಿದೆ.

