222
ಮಹಾರಾಷ್ಟ್ರ : ಮಹಾರಾಷ್ಟ್ರದ ಸಿಂಧುದುರ್ಗ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆ ಕುಸಿದುಬಿದ್ದಿದ್ದು ಮಹಾರಾಷ್ಟ್ರ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದು ಬಹಿರಂಗ ಕ್ಷಮೆಯಾಚನೆ ಮಾಡಿದ್ದಾರೆ
ಛತ್ರಪತಿ ಶಿವಾಜಿ ಮಹಾರಾಜ್ ಎಂಬುದು ಕೇವಲ ರಾಜನ ಹೆಸರಲ್ಲ ನಮಗೆ ಅವರು ದೇವರು. ನಾನಿಂದು ಅವರ ಕಾಲಿಗೆ ತಲೆಯಿಟ್ಟು ಕ್ಷಮೆ ಕೇಳುತ್ತೇನೆ’ ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಹಾರಾಷ್ಟ್ರ ಪಾರ್ಲ್ಸ ಜಿಲ್ಲೆಯಲ್ಲಿ ನೂತನ ಬಂದರು ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ನಮ್ಮ ಮೌಲ್ಯಗಳು ಬೇರೆ ನನಗೆ ನಮ್ಮ ದೇವರಿಗಿಂತ ದೊಡ್ಡವರು ಯಾರೂ ಇಲ್ಲ. ಶಿವಾಜಿ ನಮಗೆ ದೇವರು. ನಾನು ಇಲ್ಲಿಗೆ ಬಂದಿಳಿದ ತಕ್ಷಣ ಮೊದಲು ಮಾಡಿದ ಕೆಲಸವೇ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದಿದ್ದಕ್ಕೆ ಕ್ಷಮೆ ಕೇಳಿದ್ದು. ಇದರಿಂದ ನೋವು ಅನುಭವಿಸಿದ ಜನರಲ್ಲೂ ಕ್ಷಮೆ ಕೇಳುತ್ತೇನೆ’ ಎಂದು ಹೇಳಿದರು.

