72
ನವದೆಹಲಿ : ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ ಎಸ್) ತೆರಳಿ ಐತಿಹಾಸಿಕ ಯಾನ ಮುಗಿಸಿ ಭೂಮಿಗೆ ಹಿಂದಿರುಗಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ, ಭಾನುವಾರ ತಾಯ್ನಾಡು ಭಾರತಕ್ಕೆ ಆಗಮಿಸಿದರು.
ಭಾನುವಾರ ಮುಂಜಾನೆ ಅಮೆರಿಕದಿಂದ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಇಸ್ರೋ ಮುಖ್ಯಸ್ಥ ವಿ. ನಾರಾಯಣ್ ಮೊದಲಾದವರು ಆತ್ಮೀಯವಾಗಿ ಬರಮಾಡಿ ಕೊಂಡರು.
ಬಹು ದೊಡ್ಡ ಸಂಖ್ಯೆಯಲ್ಲಿ ನರೆದಿದ್ದ ಭಾರತೀಯರು ತಿರಂಗಾ ಹಾರಿಸಿ ಡ್ರಂಗಳನ್ನು ಭಾರಿಸಿ ಭವ್ಯ ಸ್ವಾಗತ ಕೋರಿದರು ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ

