80
ನವದೆಹಲಿ : ನಮಸ್ಕಾರ ದೇಶವಾಸಿಗಳೇ. ಜೈ ಹಿಂದ್.
ನಾವು 41 ವರ್ಷಗಳ ಬಳಿಕ ಬಾಹ್ಯಾಕಾಶಕ್ಕೆ ಬಂದಿದ್ದೇವೆ. ಇದು ಅದ್ಭುತ ಯಾನವಾಗಿದೆ.. ಇದು ಮೊಟ್ಟ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಹೊರಟಿರುವ ಭಾರತೀಯ ಶುಭಾಂಶು ಶುಕ್ಲಾ ಅವರು ಗಗನಯಾನದ ವೇಳೆ ಆಡಿದ ಉತ್ಸಾಹದ ಮಾತುಗಳು.
ಆಕ್ಸಿಯೋಂ-4 ಮಿಷನ್ ಭಾಗವಾಗಿ 3 ಗಗನಯಾತ್ರಿಗಳೊಂದಿಗೆ ನಭಕ್ಕೆ ನೆಗೆದ ಶುಕ್ಲಾ, ಭೂಮಿ ಯಿಂದ 200 ಕಿ.ಮೀ. ಎತ್ತರದಲ್ಲಿ ಡ್ರಾಗನ್ ನೌಕೆ ಭೂಮಿಯ ಕಕ್ಷೆಯಲ್ಲಿ ಸುತ್ತತೊಡಗಿದಾಗ ಹರ್ಷ ವ್ಯಕ್ತಪಡಿಸಿದ್ದಾರೆ. ‘ಗಂಟೆಗೆ 7.5 ಕಿ.ಮೀ. ವೇಗದಲ್ಲಿ ನಾವು ಭೂಮಿಯನ್ನು ಸುತ್ತುತ್ತಿದ್ದೇವೆ. ನನ್ನ ಭುಜದ ಮೇಲಿರುವ ಭಾರತದ ತ್ರಿವರ್ಣ ಧ್ವಜವು, ನಾನು ನಿಮ್ಮೆಲ್ಲರೊಂದಿಗಿದ್ದೇನೆ ಎಂದು ಹೇಳುತ್ತಿದೆ. ಇದು ಕೇವಲ ನನ್ನ ಐಎಸ್‌ಎಸ್ ಯಾನವಲ್ಲ ಬದಲಿಗೆ ಭಾರತದ ಮಾನವ ಸಹಿತ ಬಾಹ್ಯಾಕಾಶ ಯಾನದ ಆರಂಭವೂ ಆಗಿದೆ. ನೀವೆಲ್ಲ ಇದರ ಭಾಗವಾಗಬೇಕೆಂದು ಬಯಸುತ್ತೇನೆ’ ಎಂದರು.

