85
ನವದೆಹಲಿ : ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ (ಐಎಸ್‌ಎಸ್) ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಭೂಮಿಗೆ ಬರುವ ದಿನ ಸನ್ನಿಹಿತವಾಗಿದ್ದು, ಜು.14ಕ್ಕೆ ಮುಹೂರ್ತ ನಿಗದಿ ಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಜು.14ರ ಸಂಜೆ 4:35ಕ್ಕೆ ಐಎಸ್ ಎಸ್‌ನಿಂದ ಹೊರಟು, ಜು.15ರಂದು ಮಧ್ಯಾಹ್ನ 3 ಗಂಟೆಗೆ ಕ್ಯಾಲಿಫೋರ್ನಿಯಾದ ಕಡಲ ಮೇಲೆ ಇಳಿಯಲಿದ್ದಾರೆ

