108
ನವದೆಹಲಿ : ಕೇಂದ್ರ ಜಲಶಕ್ತಿ ಮತ್ತು ರೇಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸೋಮವಾರ ನವದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಭೇಟಿ ಸಂದರ್ಭದಲ್ಲಿ ಅವರು ಕಳೆದ 8 ತಿಂಗಳಲ್ಲಿ ತಾವು ದೇಶವ್ಯಾಪಿ ಹಾಗೂ ರಾಜ್ಯವ್ಯಾಪಿ ಪ್ರವಾಸ ಮಾಡಿದ ಹಾಗೂ ರೈಲ್ವೆ ಇಲಾಖೆಯಲ್ಲಿನ ಅಭಿವೃದ್ಧಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದರು.
ಅರುಣಾಚಲ ಪ್ರದೇಶ, ಅಸ್ಸಾಂ, ಛತೀಸ್ ಗಢ, ಜಾರ್ಖಂಡ್ ಸೇರಿ ದೇಶದ ಹಲವು ರಾಜ್ಯಗಳಿಗೆ ಅವರು ಭೇಟಿ ನೀಡಿದ್ದು, ಅಲ್ಲಿನ ಅಭಿವೃದ್ಧಿ ಕಾರ್ಯಗಳು, ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಮತ್ತು ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಜನಸಾಮಾನ್ಯರಲ್ಲಿರುವ ಭಾವನೆಗಳ ಬಗ್ಗೆ ಸಚಿವರು ಪ್ರಧಾನಿಗೆ ಮಾಹಿತಿ ನೀಡಿದ್ದಾರೆ.

