62
ನವದೆಹಲಿ : ಹೊಟ್ಟೆನೋವಿನ ಕಾರಣ ಭಾನುವಾರ ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಸೋಮವಾರ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಹೇಳಿಕೆ ಬಿಡುಗಡೆ ಮಾಡಿರುವ ಆಸ್ಪತ್ರೆ ಮುಖ್ಯಸ್ಥಡಾ.. ಸ್ಥ ಡಾ. ಅಜಯ್ ಸ್ವರೂಪ್, ‘ಸೋನಿಯಾ ಅವರು ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಪೋಎಂಟರಲಾಜಿ ವಿಭಾಗದಲ್ಲಿ ದಾಖಲಾಗಿದ್ದಾರೆ. ಅವರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ. ವೈದ್ಯರು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ’ ಎಂದಿದ್ದಾರೆ. ಇತ್ತೀಚೆಗೆ ಸೋನಿಯಾ ಹೈ ಬೀಪಿ ಕಾರಣ ಶಿಮ್ಲಾ ಆಸ್ಪತ್ರೆಗೆ ದಾಖಲಾಗಿದ್ದರು.

