Home » ಪಾಕ್‌ ಪರ ಬೇಹುಗಾರಿಕೆ : 6 ಮಂದಿ ಬಂಧನ
 

ಪಾಕ್‌ ಪರ ಬೇಹುಗಾರಿಕೆ : 6 ಮಂದಿ ಬಂಧನ

ಯೂಟ್ಯೂರ್‌ ಜ್ಯೋತಿ

by Kundapur Xpress
Spread the love

ಚಂಡೀಗಢ : ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಪರ ಬೇಹುಗಾರಿಕೆ ನಡೆಸುತ್ತಿದ್ದ ಹಿಸಾರ್ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಲೋತ್ರಾ ಅವರನ್ನು ಶನಿವಾರ ಬಂಧಿಸಲಾಗಿದೆ. ಈ ಮೂಲಕ ಹರಿಯಾಣ ಮತ್ತು ಪಂಜಾಬ್‌ಗಳಲ್ಲಿ ಕಳೆದ ಎರಡು ವಾರಗಳಲ್ಲಿ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 6 ಮಂದಿಯನ್ನು ಬಂಧಿಸಿದಂತಾಗಿದೆ.

ಟ್ರಾವೆಲ್ ವಿತ್ ಜೋ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಜ್ಯೋತಿ ಮಲ್ಲೋತ್ರಾ ಅವರನ್ನು ಹಿಸಾರ್‌ನ ನ್ಯೂ ಅಗರ್ವಾಲ್ ಎಕ್ಸ್ 2 ಟೆನ್ನನ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಈಕೆ ಯೂಟ್ಯೂಬ್‌ನಲ್ಲಿ 3.77 ಲಕ್ಷ ಚಂದಾದಾರರನ್ನು ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 1.32 ಲಕ್ಷ ಫಾಲೋವರ್‌ಗಳನ್ನು  ಹೊಂದಿರುವುದಲ್ಲದೆ, ಈ ವರ್ಷದ ಮಾರ್ಚ್‌ನಲ್ಲಿ ಪಾಕಿಸ್ತಾನಕ್ಕೆ ತಾನು ನೀಡಿದ ಭೇಟಿಯ ವಿಡಿಯೋಗಳನ್ನು ಸಹ ಪೋಸ್ಟ್ ಮಾಡಿದ್ದಾರೆ.

ಈಕೆಯ ವಿರುದ್ಧ ಎಫ್ ಐಆರ್ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಈಕೆಯನ್ನು ನ್ಯಾಯಾಲಯ 5 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಬಿಜೇಂದರ್ ಸಿಂಗ್ ಅವರ ದೂರಿನ ಮೇರೆಗೆ, ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3 ಮತ್ತು 5 ಹಾಗೂ ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್) ಸೆಕ್ಷನ್ 152ರ ಅಡಿಯಲ್ಲಿ ಜ್ಯೋತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 

Related Articles

error: Content is protected !!