Home » ಸುಹಾಸ್‌ ಶೆಟ್ಟಿ ಹತ್ಯೆ : ಪ್ರಕರಣ ಎನ್‌ ಐ ಎಗೆ
 

ಸುಹಾಸ್‌ ಶೆಟ್ಟಿ ಹತ್ಯೆ : ಪ್ರಕರಣ ಎನ್‌ ಐ ಎಗೆ

by Kundapur Xpress
Spread the love

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ದಕ್ಷಿಣ ಕನ್ನಡದ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯ ಹೊಣೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಸುಹಾಸ್ ಶೆಟ್ಟಿ ತಂದೆ-ತಾಯಿ ಸ್ವಾಗತಿಸಿದ್ದಾರೆ.

ಈ ಕುರಿತು ಭಾನುವಾರ ಕೇಂದ್ರ ಗೃಹ ಇಲಾಖೆ ಆದೇಶ ಮಾಡಿದೆ. ಹಿಂದು ಸಂಘಟನೆಗಳ ಮುಖಂಡ ಸುಹಾಸ್ ಶೆಟ್ಟಿಯವರನ್ನು ದುಷ್ಕರ್ಮಿಗಳ ತಂಡವು ಬಜಪೆಯ ಕಿನ್ನಿಪದವಿನಲ್ಲಿ ಮೇ 1ರಂದು ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿತ್ತು. ಮಂಗಳೂರು ಪೊಲೀಸ್‌ನ ಸಿಸಿಬಿ ಘಟಕ ಈ. ಪ್ರಕರಣದ ತನಿಖೆ ನಡೆಸುತ್ತಿತ್ತು. ಸಿಸಿಬಿ ಈ ಪ್ರಕರಣದಲ್ಲಿ ಒಟ್ಟು 12 ಆರೋಪಿಗಳನ್ನು ಬಂಧಿಸಿತ್ತು.

ಎನ್‌ಐಎಗೆ ವಹಿಸಲು ಮನವಿ ಮಾಡಿದ್ದ ಬಿಜೆಪಿ :

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕರಾದ ಅಶೋಕ್, ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ 4 ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು.

ವಿದೇಶಗಳಿಂದ ಫಂಡಿಂಗ್

ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ನಡೆದಿದೆ. ರಾಜ್ಯದ ಪೊಲೀಸ್ ಇಲಾಖೆಯಿಂದ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಘಟನೆ ನಡೆದ ಆರಂಭದಿಂದಲೂ ಬಿಜೆಪಿ ಸೇರಿದಂತೆ ಹಿಂದೂ ಪರ ಕಾರ್ಯಕರ್ತರು ಸುಹಾಸ್ ಹೆತ್ತವರು, ಕುಟುಂಬಸ್ಥರು ಕೂಡ ಆಗ್ರಹಿಸಿದ್ದರು.

 

Related Articles

error: Content is protected !!