80
ಹೊಸದಿಲ್ಲಿ : 2006 ರ ಮುಂಬೈ ರೈಲು ಸರಣಿ ಬಾಂಬ್ ಸ್ಫೋಟ ಪ್ರಕರಣದ ಎಲ್ಲಾ 12 ಅಪರಾಧಿಗಳನ್ನೂ ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್‌ನ ತೀರ್ಪಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ನ್ಯಾಯಮೂರ್ತಿಗಳಾದ ಎಂ. ಎಂ. ಸುಂದರೇಶ್ ಮತ್ತು ಎನ್. ಕೋಟಿಶ್ವರ್ ಸಿಂಗ್ ನೇತೃತ್ವದ ನ್ಯಾಯಪೀಠ, ಖುಲಾಸೆಗೊಂಡ ಅಪರಾಧಿಗಳು ಈಗಾಗಲೇ ಬಿಡುಗಡೆಯಾಗಿರುವುದರಿಂದ ಜೈಲಿಗೆ ಮರಳುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ, ಹೈಕೋರ್ಟ್‌ನ ತೀರ್ಪನ್ನು ಇತರ ಪ್ರಕರಣಗಳಲ್ಲಿ ಪೂರ್ವನಿದರ್ಶನವಾಗಿ ಪರಿಗಣಿಸಬಾರದು ಎಂದೂ ಪೀಠ ನಿರ್ದೇಶನ ನೀಡಿದೆ. ಅಂತೆಯೇ, ಮಹಾರಾಷ್ಟ್ರ ಸರ್ಕಾರದ ಮನವಿಗೆ ಪ್ರತಿಕ್ರಿಯಿಸಲು ಎಲ್ಲಾ ಅಪರಾಧಿಗಳಿಗೆ ನೋಟಿಸ್ ನೀಡಲಾಗಿದೆ.
ಅಪರಾಧಿಗಳ ಖುಲಾಸೆ ಭಯೋತ್ಪಾದನಾ ವಿರೋಧಿ ಕಾನೂನುಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಪ್ರಕರಣಗಳ ಮೇಲೆ ಪರಿಣಾಮ ಬೀರಬಹುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ವಾದಿಸಿದರು

