ಶಿಮ್ಲಾ: ವಿಧಾನಸಭೆ ಚುನಾವಣೆ ವೇಳೆ ನೀಡಿದ್ದ ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಬಳಿಕ ಸಾಲದ ಹೊರೆಯಲ್ಲಿ ನರಳುತ್ತಿರುವ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ ಶೌಚಾಲಯದ ಸಂಖ್ಯೆ ಆಧರಿಸಿ ತೆರಿಗೆ ವಿಧಿಸುವ ಸಂಬಂಧ ಹೊರಡಿಸಿದ್ದ ಆದೇಶವೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ಆದೇಶವನ್ನು ಬಿಜೆಪಿ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆದಾರರು ಬಹುವಾಗಿ ವ್ಯಂಗ್ಯವಾಡಿದ್ದಾರೆ. ಅದರ ಬೆನ್ನಲ್ಲೇ ಸರ್ಕಾರ ಇಂಥದೊಂದು ಆದೇಶ ಹಿಂಪಡೆದಿದೆ.