ಶ್ರೀನಗರ : ಬೇಸಿಗೆ ಪ್ರವಾಸಕ್ಕೆಂದು ಕಣಿವೆ ರಾಜ್ಯ ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರನ್ನುಗುರಿಯಾಗಿಸಿ ಇಗ್ರರು ಮಂಗಳವಾರ ಭೀಕರ ನರಮೇಧ ನಡೆಸಿದ್ದಾರೆ. ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಹಲ್ಲುಗಾವಲು ಪ್ರದೇಶದಲ್ಲಿ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುತ್ತಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತ 26 ಮಂದಿ ಸಾವನ್ನಪ್ಪಿದ್ದಾರೆ.
ಮೃತ ಕನ್ನಡಿಗರನ್ನು ಶಿವಮೊಗ್ಗದ ಉದ್ಯಮಿ ಮಂಜುನಾಥ್ ರಾವ್ ಮತ್ತು ಬೆಂಗಳೂರಿನ ಭರತ್ ಭೂಷಣ್ ಎಂದು ಗುರುತಿಸ ಲಾಗಿದೆ. ಮೃತರಲ್ಲಿ ಇಬ್ಬರು ವಿದೇಶಿಯರು ಕೂಡಾ ಇದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿಯಾದಿ ಗಣ್ಯರು ಕಟುನುಡಿಗಳಲ್ಲಿ ಖಂಡಿಸಿದ್ದಾರೆ. ಮತ್ತೊಂದೆಗೆ ಸುದ್ದಿ ತಿಳಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರಕ್ಕೆ ದೌಡಾಯಿಸಿದ್ದು, ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಈ ದಾಳಿಯನ್ನು ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದು ಪಡಿಸಿದ ಬಳಿಕದ. ಪುಲ್ವಾಮಾದಲ್ಲಿ ಯೋಧರ ಗುರಿಯಾಗಿಸಿ ನಡೆಸಿದ ಬಳಿಕ ಅತಿದೊಡ್ಡ ದಾಳಿಯಾಗಿದೆ. ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಕಳೆದ 25 ವರ್ಷಗಳಲ್ಲೇ ನಡೆಸಿದ ಅತಿದೊಡ್ಡ ದಾಳಿ ಎಂದು ಬಣ್ಣಿಸಲಾಗಿದೆ
ಭಾರತದ ಮಿನಿ ಸ್ವಿಜರ್ಲೆಂಡ್ ಎಂದೇ . ಖ್ಯಾತಿ ಪಡೆದಿರುವ ಕಾಶ್ಮೀರದ ಪಹಲ್ಟಾಂನ ಸುಂದರ ಬೈಸರನ್ ಹುಲ್ಲುಗಾವಲು ಪ್ರದೇಶದಲ್ಲಿ ನಡೆದ ದಾಳಿಯ ಹೊಣೆಯನ್ನು ಲಷ್ಕರ್ ಎ ತೊಯ್ದಾ ಸಂಘಟನೆಯ ಅಧೀನ ಸಂಘಟನೆಯಾದ ದ ರೆಸಿಸ್ಟನ್ಸ್ ಫ್ರಂಟ್ (ಟಿ ಆರ್. ಎಫ್) ಸಂಘಟನೆ ಹೊತ್ತುಕೊಂಡಿದೆ.

