117
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕರುವಾದಲ್ಲಿ ಭಾನುವಾರ ಸಂಜೆ 4-5 ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಬಾಲಕಿಯೊಬ್ಬಳು ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖ ಲಿಸಲಾಗಿದೆ. ಆರಂಭಿಕ ಗುಂಡಿನ ಚಕಮಕಿಯ ನಂತರ, ಉಗ್ರರು ಸ್ಥಳದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಸೋಮವಾರವೂ ಇದನ್ನು ತೀವ್ರಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು, ಗಡಿಯಲ್ಲಿ 3 ಉಗ್ರರ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿತ್ತು.

