Home » ಭಾರತದ ದಾಳಿಯಿಂದ ಸ್ವಲ್ಪದರಲ್ಲೇ ಮಿಸ್ ಆದ ಮಸೂದ್
 

ಭಾರತದ ದಾಳಿಯಿಂದ ಸ್ವಲ್ಪದರಲ್ಲೇ ಮಿಸ್ ಆದ ಮಸೂದ್

by Kundapur Xpress
Spread the love

ಇಸ್ಲಾಮಾಬಾದ್ : ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂದೂರ ದಾಳಿಯಲ್ಲಿ ಜೈಷ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಅಪರೇಷನ್ ಸಿಂಧೂರ್ ಮೂಲಕ ಪಾಕ್ ಉಗ್ರ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿದ ಭಾರತ ಬಹಾವುರದ ಜೈಷ್ ಪ್ರಧಾನ ಕಚೇರಿ ಸೇರಿದಂತೆ 9 ಉಗ್ರ ನೆಲೆಗಳನ್ನು ಉಡೀಸ್ ಮಾಡಿತ್ತು. ಆ ವೇಳೆ ಜೈಷ್ ಕೇಂದ್ರ ಕಚೇರಿಯಲ್ಲಿದ್ದ ಅಜರ್ ಕುಟುಂಬದ 14 ಮಂದಿ ಸಾವನ್ನಪ್ಪಿದ್ದರು. ಆಗ ಅಜರ್‌‌ ಅದರ ಪಕ್ಕದ ಕಟ್ಟಡದಲ್ಲಿ ವಾಸವಿದ್ದ. ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಎಂದು ಮೂಲಗಳು ತಿಳಿಸಿವೆ. ಈತ ಉಗ್ರ ಸಂಘಟನೆ ಜೈಷ-ಎ-ಮೊಹಮ್ಮದ್ ಮುಖ್ಯಸ್ಥ. 1994ರಲ್ಲಿ ಭಾರತದಲ್ಲಿ ಬಂಧನಕ್ಕೊಳಗಾಗಿದ್ದ. ಆದರೆ, ಏರ್‌ಇಂಡಿಯಾ ಐಸಿ 814 ವಿಮಾನ ಅಪಹರಣದ ನಂತರ ಆತನನ್ನು ಬಿಡುಗಡೆ ಮಾಡಲಾಗಿತ್ತು

 

Related Articles

error: Content is protected !!