116
ನವದೆಹಲಿ : ಅಮೆರಿಕದಿಂದ ಭಾರತಕ್ಕೆ ಗಡೀಪಾರಾಗಿರುವ 26/11 ದಾಳಿಯ ಉಗ್ರ ತಹಾವುರ್ ರಾಣಾನನ್ನು ಎನ್ ಐಎ 18 ದಿನ ತನ್ನ ಕಸ್ಟಡಿಗೆ ಪಡೆದಿದ್ದು, ಡಿಐಜಿ ಜಯ್ ರಾಯ್ ನೇತೃತ್ವದ ತಂಡ ಶುಕ್ರವಾರ ದೆಹಲಿಯ ಎನ್ ಐ ಎ ಪ್ರಧಾನ ಕಚೇರಿಯಲ್ಲಿ ಬಿಗಿ ಭದ್ರತೆಯ ನಡುವೆ ವಿಚಾರಣೆ ಆರಂಭಿಸಿದೆ.
ಎನ್‌ಐಎ ಕಚೇರಿಯ ನೆಲಮಹಡಿಯಲ್ಲಿ ಆತನ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ ಹಾಗೂ ವಿಚಾರಣೆ 3ನೇ ಮಹಡಿಯಲ್ಲಿ ನಡೆದಿದೆ. ದಿನದ 24 ಗಂಟೆಯೂ ಅಧಿಕಾರಿಗಳು ನಿಗಾ ವಹಿಸಿದ್ದಾರೆ. ಎನ್‌ಐಎ ಕಚೇರಿ ಸುತ್ತಲೂ ಭಾರಿ ಬಿಗಿಭದ್ರತೆ ಹಮ್ಮಿಕೊಳ್ಳಲಾಗಿದೆ.
ತಹಾವುರ್ ರಾಣಾ ಇರುವ ಸೆಲ್ 14X14 ವಿಸ್ತೀರ್ಣದ್ದಾಗಿದೆ ಹಾಗೂ ಸಿಸಿ ಟೀವಿ ಕ್ಯಾಮರಾ ಕಣ್ಣಾವಲಿನ ಜೊತೆಗೆ ಭದ್ರತಾ ಸಿಬ್ಬಂದಿಯ ಬಿಗಿ ಕಾವಲಿದೆ. ಅಲ್ಲದೇ ಈ ಕೊಠಡಿಯೊಳಗೆ ಎನ್‌ಐಎನ ಉನ್ನತ ಶ್ರೇಣಿಯ 12 ಅಧಿಕಾರಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ದೆಹಲಿ ನ್ಯಾಯಾಲಯ ನೀಡಿರುವ 18 ದಿನಗಳ ಕಸ್ಟಡಿ ಅವಧಿ ಮುಗಿಯುವ ತನಕ ರಾಣಾ ಇದೇ ಸೆಲ್‌ನಲ್ಲಿ ಇರಲಿದ್ದಾನೆ.

