ತಿರುಪತಿ : ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನದ ಲಡ್ಡು ವಿತರಣಾ ಕೌಂಟರ್‌ನಲ್ಲಿ ಸೋಮವಾರ ಮಧ್ಯಾಹ್ನ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ತಕ್ತ ಣವೇ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಲಡ್ಡು ಕೌಂಟರ್ ಸಂಖ್ಯೆ 47ರಲ್ಲಿ ಕಂಪ್ಯೂಟರ್ ಯುಪಿಎಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಇತ್ತೀಚಿನ ಕಾಲ್ತುಳಿತ ಘಟನೆಯ ಬೆನ್ನಲ್ಲೆ ಈ ಘಟನೆ ಸಂಭವಿಸಿರುವುದು ಕೆಲ ಸಮಯ ಆತಂಕ ಸೃಷ್ಟಿಸಿತ್ತು.