ತಿರುಪತಿ : ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಬುಧವಾರ ಸಂಜೆ ಭೀಕರ ಕಾಲ್ತುಳಿತ ಸಂಭವಿಸಿದ್ದು, 6 ಭಕ್ತರು ಸಾವನ್ನಪ್ಪಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜ.10ರಿಂದ ಆರಂಭವಾಗಲಿರುವ ವೈಕುಂಠ ದ್ವಾರ ದರ್ಶನಕ್ಕೆ ಸರ್ವದರ್ಶನ ಟಿಕೆಟ್ ಪಡೆಯಲು ಸಾವಿರಾರು ಭಕ್ತರು ಏಕಾಏಕಿ ನುಗ್ಗಿದ ಕಾರಣ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟು ಏರುವ ಭೀತಿ ಉಂಟಾಗಿದೆ
ಈ ಘಟನೆ ಬೆನ್ನಲ್ಲೇ ಟಿಟಿಡಿ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಭೆ ನಡೆಸಿದ್ದು ಪ್ರಕರಣದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆ ಕುರಿತು ದಿಗ್ಧಮೆ ವ್ಯಕ್ತಪಡಿಸಿರುವ ಅವರು ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಸ್ಥಳಕ್ಕೆ ದೌಡಾಯಿಸುವಂತೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ವಿವಿಧ ಯೋಜನೆಗಳನ್ನು ಉದ್ಘಾ ಟಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂಜೆ ವಿಶಾಖಪಟ್ಟಣಕ್ಕೆ ಆಗಮಿಸಿದ್ದರು.ಮೋದಿ ಅವರೊಂದಿಗೆ ನಾಯ್ಡು ಮತ್ತು ಡಿಸಿಎಂ ಪವನ್ ಕಲ್ಯಾಣ್ ರೋಡ್‌ಶೋ ಕೂಡ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಿಶಾಖಪಟ್ಟಣದಿಂದಲೇ ಅಧಿಕಾರಿಗಳ ಜೊತೆ ನಾಯ್ಡುವರ್ಚ್‌ಯುವಲ್ ಆಗಿ ಸಭೆ’ ನಡೆಸಿದ್ದಾರೆ.