196
ನವದೆಹಲಿ : ದೇಶದ ವಿಮಾನಗಳಿಗೆ ಬಾಂಬ್ ಬೆದರಿಕೆ ಬರುವುದು ಮುಂದುವರೆದಿದ್ದು ಇದೀಗ ಶನಿವಾರ ಒಂದೇ ದಿನ 30ಕ್ಕೂ ಅಧಿಕ ವಿಮಾನಗಳಿಗೆ ಬೆದರಿಕೆ ಸಂದೇಶಗಳು ಬಂದಿವೆ. ದೇಶೀಯ ಸಂಸ್ಥೆಗಳು ನಿರ್ವಹಿಸುವ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳು ಬೆದರಿಕೆಗೆ ಒಳಗಾಗಿವೆ.
ಎರ್ ಇಂಡಿಯಾ, ಇಂಡಿಗೋ, ಆಕಾಸಾ ಏರ್, ವಿಸ್ತಾರಾ, ಸ್ಟೈಸ್ ಜೆಟ್, ಸ್ಟಾರ್ ಏರ್ ಹಾಗೂ ಅಲಯನ್ಸ್ ಏರ್ ವಿಮಾನಗಳಲ್ಲಿ ಬಾಂಬ್ ಇರುವ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂದೇಶ ರವಾನಿಸಲಾಗಿದೆ. ಜೊತೆಗೆ ವಿಮಾನವೊಂದರ ಶೌಚಾಲಯದಲ್ಲೂ ಬೆದರಿಕೆ ಪತ್ರ ಪತ್ತೆಯಾಗಿದೆ

