ಹೊಸದಿಲ್ಲಿ : ದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆ ತರಲು ಯತ್ನಿಸುವಂತಹ ಘಟನೆಗಳು ಇತ್ತೀಚೆಗೆ ಗಮನಾರ್ಹ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದು ವ್ಯವಸ್ಥಿತ ಸಂಚಿನ ಭಾಗವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ರೈಲು ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟು ಹಳಿ ತಪ್ಪಿಸುವ ಯತ್ನಗಳು ಮರುಕಳಿಸುತ್ತಿರುವ ಬೆನ್ನಲ್ಲೇ ಇದೀಗ ವಿಮಾನಗಳಿಗೆ ಬಾಂಬ್ ಬೆದರಿಕೆಯ ಹುಸಿ ಕರೆ ಒಡ್ಡುವ ಮೂಲಕ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸುವ ಕೃತ್ಯಕ್ಕೆ ದುಷ್ಕರ್ಮಿಗಳು ಕೈಹಾಕಿದ್ದಾರೆ. ಕಳೆದ ಎರಡು ದಿನಗಳಿಂದ ಸುಮಾರು 13 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದರಿಂದಾಗಿ ಭಾರತೀಯ ವಿಮಾನಯಾನ ಮತ್ತು ಭದ್ರತಾ ಸಂಸ್ಥೆಗಳು ಹೈ ಅಲರ್ಟ್‌ನಲ್ಲಿ ಇರುವಂತಾಗಿದೆ. ಈ ಬೆದರಿಕೆ ಕರೆಗಳಿಗೆ ಕಾರಣವಾಗಿರುವ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ನಾಗರಿಕ ವಿಮಾನಯಾನ ಭದ್ರತಾ ವಿಭಾಗವು (ಬಿಸಿಎಎಸ್) ಸೈಬರ್ ಭದ್ರತಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರ ಸಹಯೋಗದೊಂದಿಗೆ ಸಕ್ರಿಯವಾಗಿ ಕಾರ್ಯೋನ್ಮುಖವಾಗಿವೆ.