83
ನವದೆಹಲಿ : ಭಾರತ-ಪಾಕ್ ನಡುವೆ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಕದನಕ್ಕೆ ವಿರಾಮ ಘೋಷಿಸಲು ಭಾರತ-ಪಾಕಿಸ್ತಾನ ಒಪ್ಪಿಕೊಂಡಿದೆ ಎಂದು ಶನಿವಾರ ಸಂಜೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದರು. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಶುಕ್ರವಾರ ರಾತ್ರಿಯಿಡೀ ನಡೆದ ಮಾತುಕತೆಯ ಬಳಿಕ ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ. ಇದಕ್ಕಾಗಿ ಎರಡೂ ದೇಶಗಳಿಗಾಗಿ ಅಭಿನಂದನೆಗಳು ಎಂದಿದ್ದರು. ಆದರೆ ಶನಿವಾರ ರಾತ್ರಿ ಮತ್ತೆ ಭಾರತದ ಮೇಲೆ ದಾಳಿ ಆರಂಭಿಸಿದ ಬಳಿಕ ಪಾಕಿಸ್ತಾನ ಟ್ರಂಪ್ ಗೆ ಮೋಸ ಎಸಗಿದೆ.

