ಡೆಹ್ರಾಡೂನ್ : ವಿವಾಹ, ವಿಚ್ಛೇದನ, ಉತ್ತರದಾಯಿತ್ವ ವಿಷಯದಲ್ಲಿ ಎಲ್ಲಾ ಧರ್ಮೀಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಮೂಲಕ ಸಮಾಜದಲ್ಲಿ ಏಕರೂಪತೆಯನ್ನು ತರುವ ಉದ್ದೇಶ ಹೊಂದಿರುವ ‘ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡದಲ್ಲಿ ಇಂದು ಸೋಮವಾರದಿಂದ ಜಾರಿಗೆ ಬರಲಿದೆ. ಸ್ವಾತಂತ್ರ್ಯಾ ನಂತರದಲ್ಲಿ ರಾಜ್ಯವೊಂದು ಇಂಥ ಕಾಯ್ದೆ ಜಾರಿಗೊಳಿಸುತ್ತಿರುವುದು ಇದೇ ಮೊದಲು
ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳ ಪೈಕಿ ಒಂದಾದ ಈ ಕಾಯ್ದೆಯನ್ನು ಇದೀಗ ಬಿಜೆಪಿ ಆಡಳಿತದ ರಾಜ್ಯವಾದ ಉತ್ತರಾ ಖಂಡದಲ್ಲಿ ಜಾರಿ ಮಾಡಲಾಗುತ್ತಿದೆ. ಹೊಸ ಕಾಯ್ದೆ ಹೇಗಿರಬೇಕು ಎಂದು ಈಗಾಗಲೇ ನಿರ್ಧರಿಸ ಲಾಗಿದ್ದು ಅದರ ಜಾರಿ ಬಗ್ಗೆ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ತರಬೇತಿ ನೀಡಿದೆ.
‘ಮೋದಿ ಯಜ್ಞ’ಕ್ಕೆ ಕೊಡುಗೆ- ಸಿಎಂ :
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ. ಪುಷ್ಕರ್ ಸಿಂಗ್ ಧಾಮಿ, ವಿಕಸಿತ ಭಾರತಕ್ಕಾಗಿ ಪ್ರಧಾನಿ ಮೋದಿ ಮಾಡುತ್ತಿರುವ ಯಜ್ಞಕ್ಕೆ ಕೊಡುಗೆ ರೂಪದಲ್ಲಿ ನಾವು ಸಂಹಿತೆಯನ್ನು ಜಾರಿಗೆ ತರುತ್ತಿದ್ದೇವೆ’ ಎಂದರು