82
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಜೂ.4ರಂದು (ಬುಧವಾರ) ಇಡೀ ಮಂತ್ರಿ ಪರಿಷತ್ ಸಭೆ ಆಯೋಜಿಸಿದ್ದಾರೆ. ಭಾರತವು ಆಪರೇಷನ್ ಸಿಂದೂರ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆ ಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದ ನಂತರ ಮೊದಲ ಸಭೆ ಇದಾಗಿದೆ.
ವಿದೇಶಾಂಗ ಸಚಿವ ಜೈಶಂಕರ್ ಅವರು ಇತ್ತೀಚಿನ ದಶಕಗಳಲ್ಲಿ ಭಾರತದ ಅತಿದೊಡ್ಡ ಮಿಲಿಟರಿ ಕಾರ್ಯಾಚರಣೆಗಳಲ್ಲಿ ಒಂದಾದ ಆಪರೇಷನ್ ಸಿಂದೂರ ಕುರಿತು ಸಭೆಯಲ್ಲಿ ವಿವರಣೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಇದೇ ವೇಳೆ ಮೋದಿ-3 -0 ಸರ್ಕಾರಕ್ಕೆ ಜೂ.9ರಂದು 1 ವರ್ಷವಾಗಲಿದ್ದು, ಈ ವೇಳೆ ವರ್ಷಾಚರಣೆ ಬಗ್ಗೆ ಕಾರ್ಯತಂತ್ರ ಹೆಣೆಯುವ ಬಗ್ಗೆಯೂ ಚರ್ಚೆ ನಡೆಯುವ ಸಂಭವವಿದೆ.

