ತಿರುಪತಿ : ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆಯಾಗಿ ವಿವಾದ ಸೃಷ್ಟಿಯಾಗಿರುವ ಕಾರಣ, ತಿರುಮಲ ವೆಂಕಟೇಶ್ವರ ದೇಗುಲದ ‘ಶುದ್ದೀಕರಣ’ ಮಾಡುವುದಾಗಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ವಿವಾದದ ಬಗ್ಗೆ ಅಧಿಕೃತ ಪ್ರಕಟಣೆ ನೀಡಿರುವ ನಾಯ್ಡು ಈಗ ಆಗಿರುವ ಅಪಚಾರವನ್ನು ಹೇಗೆ ಸರಿಪಡಿಸಬೇಕು ಎಂಬ ಬಗ್ಗೆ ನಾವು ಮಠಾಧೀಶರು, ಆರ್ಚಕರು ಮತ್ತು ಇತರ ಹಿಂದೂ ಧರ್ಮದ ಉನ್ನತ ಪಂಡಿತರೊಂದಿಗೆ ಸಮಾಲೋಚನೆ ಮಾಡುತ್ತೇವೆ ಸಂಪ್ರೋಕ್ಷಣೆಯನ್ನು (ಶುದ್ದೀಕರಣ) ಹೇಗೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಿ ನಿರ್ಧರಿಸುತ್ತೇವೆ” ಎಂದಿದ್ದಾರೆಇನ್ನು ಲಡ್ಡುವಿನಲ್ಲಿ ಪ್ರಾಣಿಯ ಕೊಬ್ಬು ಬಳಸಿದ ಆರೋಪ ಸುಳ್ಳು ಎಂದ ಹಿಂದಿನ ಮುಖ್ಯಮಂತ್ರಿ ಜಗಮ್ಮೋಹನ ರೆಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡ ಅವರು ಜಗನ್ ಅವಧಿಯಲ್ಲಿ ರಾಜ್ಯದ ಅನೇಕ ದೇವಾಲಯಗಳು ಅಪವಿತ್ರ ಆಗಿವೆ ఎంబ ದೂರುಗಳು ಬಂದಿದ್ದವು. ಪ್ರತಿ ಧರ್ಮಕ್ಕೂ ಅದರದ್ದೇ ಆದ ಪಾವಿತ್ರ್ಯವಿದೆ. ಅದನ್ನು ನಮ್ಮ ಸರ್ಕಾರ ಕಾಪಾಡಲಿದೆ’ ಸ್ಪಷ್ಟಪಡಿಸಿದ್ದಾರೆ.