Home » ಹೊಸ ವಕ್ಸ್ ಕಾಯ್ದೆ ಜಾರಿಗೆ ಸುಪ್ರೀಂ ಬ್ರೇಕ್
 

ಹೊಸ ವಕ್ಸ್ ಕಾಯ್ದೆ ಜಾರಿಗೆ ಸುಪ್ರೀಂ ಬ್ರೇಕ್

by Kundapur Xpress
Spread the love

ನವದೆಹಲಿ : ಇತ್ತೀಚೆಗೆ ಜಾರಿಗೆ ತಂದ ವಕ್ಸ್ ತಿದ್ದುಪಡಿ ಕಾಯ್ದೆ-2025ರ ಹಲವು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಮೇ 5ರವರೆಗೆ ತಡೆ ನೀಡಿದೆ. ಮತ್ತು ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದು ಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ, 1 ವಾರದಲ್ಲಿ ಈ ಕುರಿತು ನಿಲುವು ತಿಳಿಸುವಂತೆ ಕೇಂದ್ರಕ್ಕೆ ತಾಕೀತು ಮಾಡಿದೆ. ‘ಮುಂದಿನ ವಿಚಾರಣೆವರೆಗೆ ವಕ್ಸ್ ಮಂಡಳಿಗಳಿಗೆ ಯಾವುದೇ ಹೊಸ ನೇಮಕಾತಿ ಮಾಡಬಾರದು. ಈ ಹಿಂದಿನ ‘ವಕ್ಸ್-ಬೈ-ಯೂಸರ್’ (ವಕ್ ಮಂ ಡಳಿಯ ಅನುಭೋ ಗದಲ್ಲಿ ಹಿಂದಿನಿಂದಲೂ ಇರುವುದು) ನಿಯಮ ಬಳಸಿಕೊಂಡು ವಕ್ಸ್ ಮಂಡಳಿಗಳು ಸ್ವಾಧೀನಪಡಿಸಿಕೊಂಡ ಜಮೀ ನಿನಲ್ಲಿ ಬದಲಾವಣೆ ಮಾಡಬಾರದು. ಅಂದರೆ ಯಾವುದೇ ಜಮೀನನ್ನು ಡಿ-ನೋಟಿಫೈ ಮಾಡಬಾರದು’ ಎಂದು ಕೋರ್ಟ್ ತಾಕೀತು ಮಾಡಿದೆ. ವಕ್ಸ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿದ್ದ ಸುಮಾರು 75 ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸತತ 2ನೇ ದಿನವಾದ ಗುರುವಾರ ಕೂಡ ಮುಂದುವರಿಸಿತ್ತು

 

Related Articles

error: Content is protected !!