106
ಹೊಸದಿಲ್ಲಿ : ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ರಾಜ್ಯಸಭೆಯಲ್ಲಿ ವಕ್ಫ ತಿದ್ದುಪಡಿ ಮಸೂದೆ 2025 ಅಂಗೀಕಾರಗೊಂಡಿತು. ಮಸೂದೆ ಮೇಲೆ ಸುದೀರ್ಘ 12 ಗಂಟೆಗಳಿಗೂ ಹೆಚ್ಚು ಕಾಲ ಚರ್ಚೆ ನಡೆದ ನಂತರ ರಾಜ್ಯಸಭೆಯಲ್ಲಿ ಮಸೂದೆಯ ಪರವಾಗಿ ನಿರೀಕ್ಷೆಗೂ ಮೀರಿ 128 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾದವು ಇದೀಗ ರಾಷ್ಟ್ರಪತಿ ಅಂಕಿತವೊಂದೇ ಬಾಕಿಯಾಗಿದೆ
ರಾಜ್ಯಸಭೆಯಲ್ಲಿ ಗುರುವಾರ ಮಧ್ಯಾಹ್ನದಿಂದ ಮಸೂದೆ ಕುರಿತು ಆರಂಭವಾದ ಚರ್ಚೆ ಶುಕ್ರವಾರ ಬೆಳಗಿನ ಜಾವದವರೆಗೆ ನಡೆಯಿತು. ಇದೇ ವೇಳೆ ವಕ್ಸ್ ಮಂಡಳಿಗೆ ತಿದ್ದುಪಡಿ ತರುವ ಮಸೂದೆಯು ಮುಸ್ಲಿಂ ಸಮುದಾಯಕ್ಕೆ ಯಾವುದೇ ರೀತಿಯಲ್ಲೂ ಹಾನಿ ಮಾಡುವುದಿಲ್ಲ. ಬದಲಿಗೆ ಸಮುದಾಯಕ್ಕೆ ಇನ್ನಷ್ಟು ಪ್ರಯೋಜನವನ್ನು ನೀಡುತ್ತದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದರು

