ನವದೆಹಲಿ : ಭಾರತೀಯ ಸೇನೆ, ರೈಲ್ವೆ ಹೊರತುಪಡಿಸಿದರೆ ದೇಶದಲ್ಲೇ ಅತಿ ಹೆಚ್ಚು ಭೂಮಿಯ ಮಾಲೀಕತ್ವ ಹೊಂದಿರುವ ವಕ್ಸ್ ಮಂಡಳಿಯ ಆಡಳಿತದಲ್ಲಿ ಪಾರದರ್ಶಕತೆ ತರುವ, ಮಂಡಳಿಯ ಪರಮಾಧಿಕಾರ ಕಟ್ ಮಾಡುವ, ಮಹಿಳೆಯರಿಗೆ ಮತ್ತು ಮುಸ್ಲಿಂ. ಸಮುದಾಯದಲ್ಲಿನ ಎಲ್ಲಾ ವರ್ಗಗಳಿಗೂ ಮಂಡಳಿಯಲ್ಲಿ ಅವಕಾಶ ಕೊಡುವ ಐತಿಹಾಸಿಕ ವಕ್ಸ್ ತಿದ್ದುಪಡಿ ವಿಧೇಯಕವನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಯಿತು
ಸಂಸದೀಯ ಖಾತೆ ಸಚಿವ ಕಿರಣ್ ರಿಜಿಜು ಅವರಿಂದ ಬುಧವಾರ ಮಂಡಿಸಲ್ಪಟ್ಟ ವಕ್ಸ್ ತಿದ್ದುಪಡಿ ವಿಧೇಯಕದ ಕುರಿತು ಸುದೀರ್ಘ 11.00 ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಯಿತು. ಇಂಡಿಯಾ ಮೈತ್ರಿಕೂಟದ ಸದಸ್ಯರು ವಿಧೇಯಕವನ್ನು బలವಾಗಿ ವಿರೋಧಿಸಿ ಇದು ಮುಸ್ಲಿಮರ ಹಕ್ಕುಗಳ ಮೊಟಕು ಮಾಡುವ ಯತ್ನ ಎಂದು ಆರೋಪಿಸಿದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃ ತ್ವದಲ್ಲಿ ಎನ್‌ಡಿಎ ಮೈತ್ರಿಕೂಟದ ಸದಸ್ಯರು ವಿಧೇಯಕವನ್ನು ಸಮರ್ಥಿಸಿಕೊಂಡರು.
ಲೋಕಸಭೆಯಲ್ಲಿ ವಿಧೇಯಕ ಮಂಡಿಸಿ ಮಾತನಾಡಿದ ಸಂಸದೀಯ ಖಾತೆ ಸಚಿವ ಕಿರಣ್ ರಿಜಿಜು, ‘ಇದು ಯಾವುದೇ ಧರ್ಮದ ವಿರೋಧಿಯೂ ಅಲ್ಲ, ಯಾರ ಆಸ್ತಿಯನ್ನು ಕಿತ್ತುಕೊಳ್ಳುವುದೂ ಇಲ್ಲ. ಒಂದು ವೇಳೆ ಈ ಕಾಯ್ದೆಗೆ ತಿದ್ದುಪಡಿ ಮಾಡದೆ ಹೋದ್ರೆ ಮುಂದೆ ಸಂಸತ್ ಕಟ್ಟಡವನ್ನೂ ವಕ್ಸ್ ತನ್ನದೆಂದು ಹೇಳಿ ಕೊಳ್ಳಬಹುದು ಎಂದು ಹೇಳಿದರು

