117
ಇಸ್ಲಾಮಾಬಾದ್ : ಪಾಕ್ ಸೇನಾ ಮುಖ್ಯಸ್ಥ ಆಸೀಂ ಮುನೀರ್ ಅವರು ಅಣುದಾಳಿ ಬೆದರಿಕೆ ಹಾಕಿದ ನಂತರ ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಕೂಡ ಅದೇ ಮಾತು ಆಡಿದ್ದಾರೆ. ‘ಭಾರತವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತ ಮುಂದುವರಿಸಿದರೆ, ಪಾಕಿಸ್ತಾನಕ್ಕೆ ಯುದ್ಧವನ್ನು ಪರಿಗಣಿಸದೆ ಬೇರೆ ದಾರಿ ಯಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ಸಿಂದ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸಿಂಧು ಒಪ್ಪಂದ ಸ್ಥಗಿತಗೊಳಿಸಿ ಭಾರತವು ಪಾಕಿಸ್ತಾನಕ್ಕೆ ದೊಡ್ಡ ಹಾನಿ ಉಂಟುಮಾಡಿದೆ, ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಲ್ಲಾ ಪಾಕಿಸ್ತಾನಿಗಳು ಒಗ್ಗಟ್ಟಾಗಬೇಕು ಎಂದು ಒತ್ತಾಯಿಸಿದರು.
ಭಾರತವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತ ಮುಂದುವರಿಸಿದರೆ, ಪಾಕಿಸ್ತಾನಕ್ಕೆ ಯುದ್ಧವನ್ನು ಬಿಟ್ಟರೆ ಬೇರೆ ದಾರಿಯಿಲ್ಲ ಎನಿಸುತ್ತಿದೆ. ನೀವು (ಪಾಕಿಸ್ತಾನಿಗಳು) 6 ನದಿಗಳನ್ನು ಮರಳಿ ಪಡೆಯುವಷ್ಟು ಯುದ್ಧಕ್ಕೆ ಬಲಿಷ್ಠರಾಗಿದ್ದೀರಿ. ಯುದ್ಧ ನಡೆದರೆ ಭಾರತ ಸೋಲಲಿದೆ ಎಂದರು.

