ನವದೆಹಲಿ : ಅಮೆರಿಕದ ಹಿಂಡನ್‌ಬರ್ಗ್ ಸಂಸ್ಥೆಯ ವರದಿಯಿಂದಾಗಿ ಸಂಕಷ್ಟ ಎದುರಿಸಿದ್ದ ಭಾರತದ ನಂ.1 ಶ್ರೀಮಂತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಇದೀಗ ಅಮೆರಿಕದ ಸರ್ಕಾರವೇ ಮತ್ತೊಂದು ಗಂಭೀರ ಆರೋಪ ಮಾಡಿದೆ. ‘ಅದಾನಿ ಗ್ರೀನ್ ಎನರ್ಜಿ ಕಂಪನಿಯಿಂದ ಭಾರತದ ಕೆಲ ರಾಜ್ಯ ಸರ್ಕಾರಗಳು ಮಾರುಕಟ್ಟೆ ದರಕ್ಕಿಂತ ದುಬಾರಿ ದರಕ್ಕೆ ಸೌರ ವಿದ್ಯುತ್ ಖರೀದಿಸುವಂತೆ ಒಪ್ಪಂದ ಮಾಡಿಕೊಳ್ಳಲು ಅದಾನಿ ಗ್ರೂಪ್ ಸುಮಾರು 2100 ಕೋಟಿ ರುಪಾಯಿಗಳಷ್ಟು ಲಂಚವನ್ನು ಆಯಾ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನೀಡಿದೆ’ ಎಂದು ಅಮೆರಿಕದ ಕಾನೂನು ಇಲಾಖೆ ಕೋರ್ಟ್‌ಗೆ ವರದಿ ಸಲ್ಲಿಸಿದೆ. ಅದರ ಬೆನ್ನಲ್ಲೇ ನ್ಯಾಯಾಲಯ ಗೌತಮ್ ಅದಾನಿ ಸೇರಿದಂತೆ 7 ಜನರ ವಿರುದ್ಧ ಬಂಧನದ ವಾರಂಟ್ ಜಾರಿ ಮಾಡಿದೆ.