68
ಹೊಸದಿಲ್ಲಿ : ಪರಿಸರ ಸಂರಕ್ಷಣೆ ಕಡೆಗೆ ಹೆಚ್ಚಿನ ಒತ್ತು ನೀಡಿ ನಾವು ಎದುರಿಸುತ್ತಿರುವ ಪರಿಸರ ಸಂಬಂಧಿ ಸವಾಲುಗಳಿಂದ ಹೊರಬರಹುದು ಎಂದು ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ಮೋದಿಯವರು ಹೇಳಿದ್ದಾರೆ. ಈ ವಿಶ್ವ ಪರಿಸರ ದಿನದಂದು, ನಮ್ಮ ಭೂಮಿಯನ್ನು ರಕ್ಷಿಸುವ ಮತ್ತು ನಾವು ಎದುರಿಸುತ್ತಿರುವ ಸವಾಲುಗಳನ್ನು ನಿವಾರಿಸುವತ್ತ ನಮ್ಮ ಪ್ರಯತ್ನಗಳನ್ನು ಇನ್ನಷ್ಟು ಹೆಚ್ಚಿಸೋಣ. ನಮ್ಮ ಪರಿಸರವನ್ನು ಹಸಿರು ಮತ್ತು ಉತ್ತಮಗೊಳಿಸಲು ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ ಎಲ್ಲರನ್ನು ನಾನು ಅಭಿನಂದಿಸುತ್ತೇನೆ ಎಂದು ಅವರು ಎಕ್ಸ್‌ನಲ್ಲಿ ಹೇಳಿದರು.
ನಂತರ ಒಂದು ವಿಡಿಯೋ ಸಂದೇಶದಲ್ಲಿ ಮೋದಿ, ಜಾಗತಿಕ ಹವಾಮಾನದ ರಕ್ಷಣೆಗಾಗಿ ಪ್ರತಿಯೊಂದು ದೇಶವೂ ಸ್ವಹಿತಾಸಕ್ತಿಯನ್ನು ಮೀರಿ ನಿಲ್ಲಬೇಕಾಗುತ್ತದೆ ಎಂದು ಹೇಳಿದರು. ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಈ ವರ್ಷದ ವಿಶ್ವ ಪರಿಸರ ದಿನದ ವಿಷಯವಾಗಿದೆ ಮತ್ತು ಭಾರತವು ಕಳೆದ ನಾಲೈದು ವರ್ಷಗಳಿಂದ ನಿರಂತರವಾಗಿ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಒತ್ತಿ ಹೇಳಿದರು.

