69
ನವದೆಹಲಿ : 11ನೇ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ದೇಶ ಹಾಗೂ ವಿದೇಶಗಳ ವಿವಿಧೆಡೆ ಹಮ್ಮಿಕೊಂಡಿದ್ದ ಕಾರ್ಯಕ್ರಮ ಗಳು ಯಶಸ್ವಿಯಾಗಿ ನಡೆದವು. ಪ್ರಧಾನಿ ನರೇಂದ್ರ ಮೋದಿಯವರು ಆಂಧ್ರಪ್ರದೇಶದ ವಿಶಾಖ ಪಟ್ಟಣಂನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದರು
ರಾಷ್ಟ್ರಪತಿ ದೌಪದಿ ಮುರ್ಮು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅಮೆರಿಕದ ನ್ಯೂ ಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಯಲ್ಲಿ ಖ್ಯಾತ ವೈದ್ಯ, ಲೇಖಕ ದೀಪಕ್ ಚೋಪ್ರಾ ನೇತೃತ್ವದಲ್ಲಿ ಯೋಗ ಕಾರ್ಯಕ್ರಮ ನಡೆಯಿತು. ವಿಶ್ವದ 191 ಕಡೆ ಭಾರತದ ವತಿಯಿಂದ ಯೋಗ ದಿನಾಚರಣೆ ಆಯೋಜಿಸಲಾಗಿತ್ತು.

