ಬಾಲಿವುಡ್ ಗಾಯಕ ಅರ್ಮಾನ್ ಮಲಿಕ್ ಇಂದು ಕುಟುಂಬಸ್ಥರ ಸಮ್ಮುಖದಲ್ಲಿ ಬಹುಕಾಲದ ಗೆಳತಿ ಆಶ್ನಾ ಶ್ರಾಫ್ ಜೊತೆ ಹಸೆಮಣೆ ಏರಿದ್ದಾರೆ. ಮದುವೆಯ ಸುಂದರ ಫೋಟೋಗಳನ್ನು ಗಾಯಕ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಆಶ್ನಾ ಕೇಸರಿ ಬಣ್ಣದ ಉಡುಗೆಯಲ್ಲಿ ಮಿಂಚಿದ್ರೆ, ಅರ್ಮಾನ್ ಲೈಟ್ ಬಣ್ಣ ಶೆರ್ವಾನಿಯಲ್ಲಿ ಧರಿಸಿದ್ದಾರೆ
ಖುಷಿ ಖುಷಿಯಾಗಿ ಹೊಸ ಬಾಳಿಗೆ ಕಾಲಿಟ್ಟಿರುವ ಅರ್ಮಾನ್ ದಂಪತಿಯ ಫೋಟೋ ನೋಡಿ ಫ್ಯಾನ್ಸ್, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ.ಕಳೆದ ವರ್ಷ ಆಶ್ನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಇನ್ನೂ ಬಹು ಭಾಷೆಗಳಲ್ಲಿ ಹಾಡಿ ಸೈ ಎನಿಸಿಕೊಂಡಿರುವ ಗಾಯಕ ಅರ್ಮಾನ್ ಕನ್ನಡದಲ್ಲಿ 40ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಡಿದ್ದಾರೆ.