Home » ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತ್ತಿದೆ
 

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತ್ತಿದೆ

by Kundapur Xpress
Spread the love

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಯುಗಾದಿ ಹಿಂದುಗಳ ಪಾಲಿನ ಹೊಸ ವರ್ಷ ಪ್ರಕೃತಿಯಲ್ಲಿ ಬದಲಾವಣೆ,ಇದು ಚಳಿಗಾಲದ ಕಠೋರವಾದ ಚಳಿಯ ನಂತರ ವಸಂತಕಾಲದ ಆರಂಭ ಮತ್ತು ಸೌಮ್ಯವಾದ ಹವಾಮಾನವನ್ನು ಸೂಚಿಸುವ ಹಬ್ಬವಾಗಿದೆ. ಇದು ವಸಂತ ಋತುವನ್ನು ಸ್ವಾಗತಿಸಲು ಆಚರಿಸುವ ಹಬ್ಬವೂ ಹೌದು.ಹಿಂದೂ ಪುರಾಣಗಳ ಪ್ರಕಾರ, ಬ್ರಹ್ಮ ದೇವರು ಯುಗಾದಿಯಂದು ಬ್ರಹ್ಮಾಂಡದ ಸೃಷ್ಟಿಯನ್ನು ಪ್ರಾರಂಭಿಸಿದನು ಎನ್ನುವ ಉಲ್ಲೇಖವಿದೆ. ದುರ್ಗಾ ದೇವಿಯ ಒಂಬತ್ತು ರೂಪಗಳನ್ನು ಆಚರಿಸುವ ಒಂಬತ್ತು ದಿನಗಳ ಉತ್ಸವದ ಮೊದಲ ದಿನ – ಚೈತ್ರ ನವರಾತ್ರಿಯು ಈ ದಿನದಿಂದ ಪ್ರಾರಂಭವಾಗುತ್ತದೆ. ಭಗವಾನ್ ಬ್ರಹ್ಮನಿಂದ ಮಾನವಕುಲದ ಸೃಷ್ಟಿಯ ಪ್ರಾರಂಭವನ್ನು ಗುರುತಿಸಲು ಯುಗಾದಿ ಎಂದು ಈ ದಿನವನ್ನು ಆಚರಿಸಲಾಗುತ್ತದೆ.ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದ ವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಬೇಂದ್ರೆಯವರ ಯುಗಾದಿ ಬಗೆಗಿನ ಈ ಕವಿತೆ ಸುಪ್ರಸಿದ್ಧವಾದುದು.
“ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತ್ತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ .ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ಯುಗಾದಿ ಹಬ್ಬ ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟಾರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು. ಯುಗಾದಿಯು ಸರ್ವರಿಗೂ ಒಳ್ಳೆಯದನ್ನು ಮಾಡಲಿ

ಪ್ರದೀಪ್‌ ಚಿನ್ಮಯಿ ಆಸ್ಪತ್ರೆ

ಕುಂದಾಪುರ

   

Related Articles

error: Content is protected !!