ಕುಂದಾಪುರ : ಇಲ್ಲಿನ ಭಂಡಾರ್ಕಾರ್ಸ್ ಕಲಾ & ವಿಜ್ಞಾನ ಕಾಲೇಜು ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಪದವಿ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಂಗೀತ ಸ್ಪರ್ಧೆಯಲ್ಲಿ ನಗರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ವೈಯಕ್ತಿಕವಾಗಿ ಪ್ರಥಮ ಬಿ.ಕಾಂ.ನ ಶ್ರೇಯಾ ಖಾರ್ವಿ ಜನಪದ ಗೀತೆಯಲ್ಲಿ ಪ್ರಥಮ ಹಾಗೂ ಶಾಸ್ತ್ರೀಯ ಸಂಗೀತದಲ್ಲಿ ದ್ವಿತೀಯ ಸ್ಥಾನ, ಶ್ರೀಶಾಂತ್ ಚಿತ್ರಗೀತೆ ಸ್ಪರ್ಧೆಯಲ್ಲಿ ಪ್ರಥಮ, ದೇಶಭಕ್ತಿ ಗೀತೆ ಸಮೂಹ ಗಾನದಲ್ಲಿ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಸಮಗ್ರ ಪುರಸ್ಕಾರವನ್ನು ಪಡೆದುಕೊಂಡಿದ್ದು, ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.