221
ಚುನಾವಣೆ ಘೋಷಣೆ ಮೇ 10 : ಮತದಾನ
ಬೆಂಗಳೂರು : ಕರ್ನಾಟಕ ವಿಧಾನಸಭೆಯ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು, ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆ ದಿನವಾಗಿದ್ದು, ನಾಮಪತ್ರ ವಾಪಾಸ್ ಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿರುತ್ತದೆ.
ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದರಿಂದ ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.

