Home » ಭಕ್ತಸಾಗರದ ಮಧ್ಯೆ ಗವಿಸಿದ್ಧೇಶ್ವರ ತೇರು
 

ಭಕ್ತಸಾಗರದ ಮಧ್ಯೆ ಗವಿಸಿದ್ಧೇಶ್ವರ ತೇರು

by Kundapur Xpress
Spread the love

ಬೆಂಗಳೂರು : ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ದೇಶ್ವರರ 208ನೇ ಮಹಾರಥೋತ್ಸವ ಶನಿವಾರ ಸಂಜೆ ಸುಮಾರು 8 ಲಕ್ಷ ಭಕ್ತರ ಹರ್ಷೋದ್ಗಾರ ನಡುವೆ ಅದ್ದೂರಿಯಾಗಿ ನೆರವೇರಿತು. ಸೇರಿದ್ದ ಭಕ್ತ ಕೋಟಿಯ ಜೈಕಾರ ಮುಗಿಲು ಮುಟ್ಟಿತ್ತ ಮೈಸೂರಿನ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಬಸವಪಟ ಆರೋಹಣ ನೆರವೇರಿಸುವ ಮೂಲಕ ಐತಿಹಾಸಿಕ ರಥೋತ್ಸವಕ್ಕೆ ಚಾಲನೆ ನೀಡಿದರು ಗವಿಸಿದ್ದೇಶ್ವರ ಶ್ರೀ ಲಕ್ಷಾಂತರ ಭಕ್ತರಿಗೆ ರಥ ಎಳೆಯಲು ಸನ್ನೆ ಮಾಡಿದಾಗ 58 ಅಡಿ ಎತ್ತರದ ತೇರು ಗಜಗಾಂಭಿರ್ಯದಿಂದ ರಥಬೀದಿಯಲ್ಲಿ ಸಾಗಿತು. ಹೀಗೆ ಸಾಗುತ್ತಿದ್ದಂತೆಯೇ ಭಕ್ತಗಢಣ ಉತ್ತತ್ತಿ  ಎಸೆದು ಭಕ್ತಿ ಪ್ರದರ್ಶಿಸಿದರು

 

Related Articles

error: Content is protected !!