247
ಕಳವಾದ ವಸ್ತುಗಳು ಮಾಲೀಕರಗೆ ಹಸ್ತಾಂತರ
ಉಡುಪಿ:ಉಡುಪಿ ಜಿಲ್ಲೆಯಲ್ಲಿ ದಾಖಾಲಾಗಿದ್ದ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 75 ಲಕ್ಷ ರೂಪಾಯಿಯ ಸೊತ್ತುಗಳನ್ನು ಮಾಲೀಕರಿಗೆ ವಾಪಾಸು ನೀಡಲಾಯಿತು ಈ ಅಪರಾಧ ಕೃತ್ಯಗಳನ್ನು ಪತ್ತೆಹಚ್ಚಿದ ಪೋಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ತಿಳಿಸಿದರು

ಮಂಗಳವಾರ ಉದುಪಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ಚಿನ್ನಾಭರಣ ಅಂಗಡಿ ದೊಡ್ಡ ಮಟ್ಟದ ವ್ಯಾಪಾರ ಮಾಡುವವರು ಹಾಗೂ ನಾಗರಿಕರು ತಮ್ಮ ಸೊತ್ತುಗಳನ್ನು ಕಾಪಾಡಿಕೊಳ್ಳಲು ಮುಂಜಾಗ್ರತೆ ವಹಿಸಿಕೊಳ್ಳಬೇಕು ಧಾರ್ಮಿಕ ಸ್ಥಳಗಳಲ್ಲಿಯೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು

ಗ್ರಾಮೀಣ ಭಾಗದಲ್ಲಿ ಅಪರಿಚಿತರು ಹಾಗೂ ಅನುಮಾನಾಸ್ಪದವಾಗಿ ಯಾರಾದರೂ ಕಂಡು ಬಂದಲ್ಲಿ ತಕ್ಷಣ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಎಂದು ತಿಳಿಸಿದರು


